{ads}

ಶಾಲೆಗಳಲ್ಲಿ ವಿದ್ಯಾರ್ಥಿಗಳು ಮೊಟ್ಟೆ ಕೇಳಿದರೆ ಚಿಕ್ಕಿ ನೀಡುವಂತಿಲ್ಲ, ರಾಜ್ಯ ಸರ್ಕಾರ ಆದೇಶ


ಬೆಂಗಳೂರು:-

ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಮೊಟ್ಟೆ ಕೇಳಿದರೆ ಮೊಟ್ಟೆಯನ್ನೇ ನೀಡಬೇಕು. ಬಾಳೆಹಣ್ಣು, ಚಿಕ್ಕಿ ನೀಡುವಂತಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಸರ್ಕಾರಿ ಶಾಲೆಯಲ್ಲಿ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದ್ದು, ಮೊಟ್ಟೆಯನ್ನು ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು ಮತ್ತು ನೀಡಬಹುದು.

ಆದರೆ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು ಮತ್ತು ಚಿಕ್ಕಿ ನೀಡುತ್ತಿರುವುದು ಇಲಾಖೆ ಗಮನಕ್ಕೆ ಬಂದಿದೆ. ಆದ್ದರಿಂದ ಮೊಟ್ಟೆ ಕೇಳಿದವರಿಗೆ ಮೊಟ್ಟೆಯನ್ನೇ ನೀಡಬೇಕು ಎಂದು ಸೂಚಿಸಿದೆ.

ಶಾಲೆಗಳಲ್ಲಿ ಮೊಟ್ಟೆ ಕೇಳಿದವರಿಗೆ ಬಾಳೆಹಣ್ಣು ಮತ್ತು ಚಿಕ್ಕಿ ನೀಡಿದಂತೆ ರಾಜ್ಯದ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಉಸ್ತುವಾರಿ ವಹಿಸಬೇಕು. ಇದಕ್ಕಾಗಿಯೇ ಶಿಕ್ಷಣ ಇಲಾಖೆಯೂ ಪ್ರತಿ ಮೊಟ್ಟೆಗಾಗಿ 6 ರೂಪಾಯಿ ನೀಡುತ್ತಿದ್ದು, ಮೊಟ್ಟೆ ದರ ಹೆಚ್ಚಳವಾಗಿದ್ದರೂ ಪರಿಷ್ಕರಣೆಗೆ ಅವಕಾಶವಿಲ್ಲ. ಈ ಹಿಂದೆ ಕಡಿಮೆ ದರಕ್ಕೆ ಮೊಟ್ಟೆ ಖರೀದಿಸಿದ್ದರೆ ಆ ಹಣದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಅಥವಾ SDMC ಹಂತದಲ್ಲಿ ಲಭ್ಯವಿರುವ ಅನುದಾನ ಬಳಸಿಕೊಳ್ಳಬೇಕು ಎಂದು ವಿವರಿಸಲಾಗಿದೆ.

ಮಕ್ಕಳಿಗೆ ಅರಬೆಂದ ಮೊಟ್ಟೆ ನೀಡಬೇಡಿ

ಬಿಸಿಯೂಟ ವಿತರಿಸುವ ಶಾಲೆ ಹಂತದಲ್ಲೇ ಮೊಟ್ಟೆ ಬೇಯಿಸಿ ಕೊಡಬೇಕು. ಕೆಲವು ಕಡೆ ಅರೆಬೆಂದ ಮೊಟ್ಟೆ ನೀಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದ್ದು ತಕ್ಷಣ ಎಚ್ಚೆತ್ತುಕೊಳ್ಳಬೇಕು. ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿ ವಿತರಿಸುವ ಬಗ್ಗೆ ಸೂಕ್ತ ಲೆಕ್ಕ ನಿರ್ವಹಿಸಿ ಮೇಲ್ವಿಚಾರಣೆಯನ್ನು ಮಾಡಬೇಕು. ಮಕ್ಕಳಲ್ಲಿರುವ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಜಾರಿಗೆ ತಂದಿರುವ ಈ ಯೋಜನೆಯನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.


ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ

Post a Comment

0 Comments
* Please Don't Spam Here. All the Comments are Reviewed by Admin.