{ads}

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 5267 ಶಿಕ್ಷಕರ ನೇರ ನೇಮಕಾತಿಗೆ ಸರ್ಕಾರ ಆದೇಶ



 ಬೆಂಗಳೂರು:

ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ.

2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿನ ಘೋಷಣೆಯಂತೆ 2024-25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಷ್ಟು ಅಂದರೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಯದ್ದೆಗಳ ವಿವರಗಳೊಂದಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು. ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ ಘೋಷಿಸಿರುವಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಷ್ಟು ಅಂದರೆ ಈ ಕೆಳಗೆ ವಿವರಿಸಲಾದಂತೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ.





Tags

Post a Comment

0 Comments
* Please Don't Spam Here. All the Comments are Reviewed by Admin.