{ads}

ಸರ್ಕಾರಿ ಕಚೇರಿ ಕೆಲಸದ ಸಮಯ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿ



ರಾಜ್ಯದಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಬೇಕು ಎಂದು ಹಿಂದಿನಿಂದಲೂ ಬೇಡಿಕೆ ಇದೆ. ಅದರಲ್ಲೂ ಬೇಸಿಗೆ ಸಮಯದಲ್ಲಿ ಕಚೇರಿಗಳ ಸಮಯ ಬದಲಾಗಿದ್ದರೆ ಎಷ್ಟು ಚೆನ್ನಾಗಿರುತ್ತೆ? ಎಂದು ದೇವರಲ್ಲಿ ಪ್ರಾರ್ಥಿಸೋರೂ ಇದ್ದಾರೆ. ಬೇಸಿಗೆಯಲ್ಲಿ ಕಚೇರಿಗಳಿಗೆ ಅಲೆಯುವ ಸಾರ್ವಜನಿಕರಿಗೂ ಭಾರಿ ಸಮಸ್ಯೆ ಎದುರಾಗುತ್ತೆ.


ಈಗಾಗಲೇ ಕೆಲವು ರಾಜ್ಯಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯವನ್ನು ಬದಲಿಸಲಾಗಿದೆ. ಇದೀಗ ಕರ್ನಾಟಕದಲ್ಲೂ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾಗುವ ಸಾಧ್ಯತೆ ಇದೆ. ಈ ಬಗ್ಗೆ ಕಾಂಗ್ರೆಸ್ ದಿನೇಶ್‌ ಗುಂಡೂರಾವ್‌ ಅವರು ಮಾಹಿತಿ ನೀಡಿದ್ದಾರೆ.


ಹೌದು, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ. ರಾಯಚೂರಿನಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಬೇಸಿಗೆ ಆರಂಭದಲ್ಲೇ ಬಿಸಿಲು ಹೆಚ್ಚಾಗಿ ತಾಪಮಾನವು 43ರಿಂದ 44 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪುತ್ತಿದೆ. ಈ ಹಿನ್ನೆಲೆ ಸಾರ್ವಜನಿಕರು ಜನರು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಇನ್ನು ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮಧ್ಯಾಹ್ನ 12ರಿಂದ 3ರವರೆಗೆ ಹೊರಗೆ ಕೆಲಸ ಮಾಡಬೇಡಿ. ಮನೆ ಅಥವಾ ಕಚೇರಿಯಲ್ಲೇ ಇರಿ ಎಂದು ಸಲಹೆ ನೀಡಿದ್ದಾರೆ.


ಈಗ ಬಿಸಿಲು ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯ ಬದಲಾಯಿಸಬೇಕು ಎಂಬ ಬಗ್ಗೆ ಸರ್ಕಾರ ಮಟ್ಟದಲ್ಲಿ ತೀರ್ಮಾನ ಮಾಡಿಕೊಳ್ಳಲಿ ಎಂದು ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಮಧ್ಯಾಹ್ನದ ವೇಳೆ ಅಧಿಕಾರಿಗಳು ಫೀಲ್ಡ್‌ ವಿಸಿಟ್‌ ಮಾಡೋದನ್ನು ನಿಲ್ಲಿಸಿ. ಸರ್ಕಾರಿ ಅಧಿಕಾರಿಗಳು ಮಧ್ಯಾಹ್ನ 12ರಿಂದ 3ರವರೆಗೆ ಯಾವುದೇ ಫೀಲ್ಡ್‌ ವಿಸಿಟ್‌ ಮಾಡಬೇಡಿ. ಬೆಳಿಗ್ಗೆ ಅಥವಾ ಸಂಜೆ ವೇಳೆ ಮಾಡಿಕೊಳ್ಳುವುದು ಉತ್ತಮ. ಬಿಸಿಲು ಹೆಚ್ಚಾಗಿರುವುದಕ್ಕೆ ನಾನು ಸರ್ಕಾರ ರಜೆ ಕೊಡಬೇಕು ಎಂದು ಹೇಳಲ್ಲ. ಇದಕ್ಕೆ ಬದಲಾಗಿ ಸಮಯ ಬದಲಾವಣೆ ಮಾಡಿಕೊಳ್ಳುವುದೇ ಒಳ್ಳೆಯದು ಎಂದು ಅಭಿಪ್ರಾಯ ತಿಳಿಸಿದ್ದಾರೆ.


ಕರ್ನಾಟಕದ ಹಲವು ಭಾಗಗಳಲ್ಲಿ ತಾಪಮಾನ 44 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಿದೆ. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ಮಧ್ಯಾಹ್ನ ಸಮಯದಲ್ಲಿ ಮನೆಯೊಳಗೆ ಇರುವುದು ಒಳ್ಳೆಯದು. ಬಿಸಿಲಿನ ಬಗ್ಗೆ ಶಾಲೆಗಳು ಕೂಡ ಗಮನ ಕೊಟ್ಟರೆ ಒಳ್ಳೆಯದು. ಸೇವಿಸುವ ಆಹಾರದ ಬಗ್ಗೆಯೂ ಗಮನ ಕೊಡಿ. ಬೇಸಿಗೆಯಿಂದ ತಪ್ಪಿಸಿಕೊಳ್ಳಲು ಹೆಚ್ಚಾಗಿ ನೀರು ಕುಡಿಯಿರಿ. ಬಿಸಿಲಿನ ತಾಪ ಹೆಚ್ಚಳದ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್‌ನ ಅಗತ್ಯವೇನಿಲ್ಲ. ಆದರೆ ನಮ್ಮಲ್ಲಿ ಎಲ್ಲ ಸೌಲಭ್ಯಗಳಿವೆ ಎಂದು ಹೇಳಿದ್ದಾರೆ.

Tags

Post a Comment

0 Comments
* Please Don't Spam Here. All the Comments are Reviewed by Admin.