{ads}

ರಾಜ್ಯದ ಎಲ್ಲಾ ಶಾಲೆಗಳು ತುರ್ತಾಗಿ ಈ ಮಾಹಿತಿ ಸಲ್ಲಿಸುವಂತೆ ಸರ್ಕಾರದಿಂದ ಮಹತ್ವದ ಆದೇಶ

ಕನ್ನಡ ನ್ಯೂಸ್-24

ಬೆಂಗಳೂರು:- ತುರ್ತಾಗಿ ಈ ಮಾಹಿತಿಯನ್ನು ಸಲ್ಲಿಸುವಂತೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಾಜ್ಯ ಸರ್ಕಾರದಿಂದ ಸೂಚನೆ ನೀಡಿದೆ.

 

ಈ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸಭಾ ಸೂಚನಾ ಪತ್ರದಂತೆ 2025-26ನೇ ಸಾಲಿನ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯನ್ನು ದಿನಾಂಕ:25-08-2025 ರಂದು ಹಮಿಕೊಳ್ಳಲಾಗಿದ್ದು, ಸದರಿ ಸಭೆಗೆ ಸಂಬಂಧಿಸಿದಂತೆ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಂದ ಅಟ್ರಾಸಿಟಿ ಪ್ರಕರಣಗಳು ದಾಖಲಾಗಿದ್ದಲ್ಲಿ ವಿವರವನ್ನು ಸಭೆಗೆ ಮಾಹಿತಿಯನ್ನು ಒದಗಿಸಬೇಕಾಗಿರುವುದರಿಂದ ಸದರಿ ಮಾಹಿತಿಯನ್ನು ಈ ಕೆಳಗಿನ ನಮೂನೆಯಲ್ಲಿ ತಪ್ಪದೇ E-mail ವಿಳಾಸ est4cpibng@gmail.com ಕಳುಹಿಸಲು ತಿಳಿಸಿದೆ. ಒಂದು ವೇಳೆ ಜಿಲ್ಲೆಯಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ಸಂಬಂಧಿಸಿದ ಯಾವುದೇ ಪ್ರಕರಣಗಳು ಇರದೇ ಇದ್ದಲ್ಲಿ ಶೂನ್ಯ ವರದಿಯನ್ನು ಸಲ್ಲಿಸುವುದು ಎಂದು ತಿಳಿಸಿದೆ.


 ಧನ್ಯವಾದಗಳು...

Tags

Post a Comment

0 Comments
* Please Don't Spam Here. All the Comments are Reviewed by Admin.