{ads}

ಪಾಠ ಕೇಳುತ್ತಿದ್ದಾಗಲೇ ಶಾಲಾ ಮೇಲ್ಛಾವಣಿ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ

ಕನ್ನಡ ನ್ಯೂಸ-24

ರಾಜ್ಯದ ಕಲಬುರ್ಗಿ ಜಿಲ್ಲೆಯಲ್ಲಿ ಪಾಠ ಕೇಳುತ್ತಿದ್ದಾಗಲೇ ಶಾಲಾ ಮೇಲ್ಛಾವಣಿ ಕುಸಿದು ಬಿದ್ದ ಕಾರಣ 3 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.


ರಾಜ್ಯದ ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿತಗೊಂಡಿದೆ.




ಈ ವೇಳೆ ಶಾಲೆಯಲ್ಲಿ ಪಾಠ ಕೇಳುತ್ತಿದ್ದರಿಂದಾಗಿ 3 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.


ಶಾಲಾ ಮೇಲ್ಛಾವಣಿ ಕುಸಿತಗೊಂಡ ಪರಿಣಾಮ ಶ್ರೀನಿವಾಸ್, ಕಾವೇರಿ, ಅಕ್ಷತಾ ಎಂಬ 3 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟವಶ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಗಾಯಗೊಂಡಿರುವಂತ  ವಿದ್ಯಾರ್ಥಿಗಳನ್ನು ಗುರುಮಠಕಲ್ ತಾಲ್ಲೂಕು ಆಸ್ಪತ್ರೆಗೆ, ಮತ್ತೋರ್ವ ವಿದ್ಯಾರ್ಥಿಯನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


 ಧನ್ಯವಾದಗಳು.......
Tags

Post a Comment

0 Comments
* Please Don't Spam Here. All the Comments are Reviewed by Admin.