{ads}

ಮೂರು ದಿನ ವಿಶೇಷ ರಜೆ, DCM ಡಿ.ಕೆ ಶಿವಕುಮಾರ್ ಮಹತ್ವದ ಘೋಷಣೆ, ಕಾರಣವೇನು..?


ಬಿಹಾರದ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯು ಜಿದ್ದಾಜಿದ್ದಿನಿಂದ ಕೂಡಿದೆ. ಅದರಲ್ಲೂ ಕಾಂಗ್ರೆಸ್ ನೇತೃತ್ವದ ಮಿತ್ರ ಪಕ್ಷಗಳು ಹಾಗೂ ಬಿಜೆಪಿ ನೇತೃತ್ವದ ಮಿತ್ರಪಕ್ಷಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದೆ.

ಮುಂದಿನ ವಾರ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಹಂತಿಮ ಹಂತದ ಕಸರತ್ತು ನಡೆಸಲಾಗಿದೆ.


ಬಿಹಾರ ವಿಧಾನಸಭೆಯ 243 ಸ್ಥಾಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಚುನಾವಣೆ ವಿಚಾರದಲ್ಲಿ ಉಪ ಮುಖ್ಯಮಂತ್ರಿ(DCM) ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಡಿ.ಕೆ ಶಿವಕುಮಾರ್ ಅವರು ತೆಗೆದಿಕೊಂಡಿರುವ ನಿರ್ಧಾರವು ಕನ್ನಡಿಗರ ಹುಬ್ಬೇರಿಸುವಂತೆ ಮಾಡಿದೆ. ಬೆಂಗಳೂರಿನಲ್ಲಿರುವ ಬಿಹಾರಿಗಳ ಹಿತದೃಷ್ಟಿಯಿಂದ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು. ಈ ವಿಚಾರವು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಹಾರ ವಿಧಾನಸಭೆ ಚುನಾವಣೆಯು ಈ ಬಾರಿ ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ರಾಜಕಾರಣಿಗಳು ಸಹ ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿರುವುದು ಕೂಡ ಕಂಡು ಬಂದಿದೆ.


ನಮ್ಮ ರಾಜ್ಯದ ಬೆಂಗಳೂರಿನಲ್ಲಿರುವ ಬಿಹಾರದವರಿಗೆ ರಜೆ:-

ಇನ್ನು ಬೆಂಗಳೂರಿನಲ್ಲಿರುವ ಬಿಹಾರದ ಜನತೆಗೆ ಮೂರು ದಿನಗಳ ರಜೆ ಕೊಡುವ ಸಂಬಂಧ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮಹತ್ವದ ಸೂಚನೆಯನ್ನು ನೀಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿರುವ ಬಿಹಾರದ ಜನರಿಗೆ ರಜೆ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಇರುವುದರಿಂದ ಬೆಂಗಳೂರಿನ ವ್ಯವಹಾರ ಸಂಸ್ಥೆಗಳು, ಕಂಪನಿಗಳಲ್ಲಿ ಬಿಹಾರದ ಜನರು ಹೆಚ್ಚಾಗಿ ಕೆಲಸ ಮಾಡುತ್ತಿದ್ದರೆ, ಅವರಿಗೆ ಮೂರರಿಂದ ನಾಲ್ಕು ದಿನಗಳ ರಜೆ ಕೊಡಬೇಕು. ಈ ಮೂಲಕ ಅವರು ಮತ ಚಲಾಯಿಸುವುದಕ್ಕೆ ಅವಕಾಶ ಕೊಡಬೇಕು ಅಂತ ಅವರು ಮನವಿ ಮಾಡಿದ್ದಾರೆ.


ಕನ್ನಡಿಗರ ಅಸಮಾಧಾನ:-

 ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬಿಹಾರದವರು ಸೇರಿದಂತೆ ವಿವಿಧ ರಾಜ್ಯಗಳಿಂದ ಬಂದಿರುವ ವಲಸಿಗರ ಸಂಖ್ಯೆ ಹೆಚ್ಚಳವಾಗಿದೆ ಎನ್ನುವ ವಿಚಾರವು ಹೆಚ್ಚು ಚರ್ಚೆ ಆಗುತ್ತಿರುವ ಸಂದರ್ಭದಲ್ಲಿಯೇ ಬಿಹಾರ ಮತ್ತು ಬಿಹಾರಿಗರ ಪರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬ್ಯಾಟಿಂಗ್ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.


ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್‌ನಲ್ಲಿ 'ಕರ್ನಾಟಕ ಬಿಹಾರ್ ಸಮಾಜ' ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಿಹಾರ ಮೂಲದ ಬೆಂಗಳೂರು ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಕಳೆದ ಎರಡು ದಶಕಗಳಿಂದ ಆಡಳಿತದಲ್ಲಿದ್ದರೂ ಬಿಹಾರ್ ರಾಜ್ಯವನ್ನು ಅಭಿವೃದ್ಧಿಪಡಿಸುವುದರಲ್ಲಿ ಬಿಜೆಪಿ - ಜೆಡಿಯು ನೇತೃತ್ವದ ಮೈತ್ರಿಕೂಟ ವಿಫಲವಾಗಿದೆ. ಈ ಬಾರಿಯ ಬಿಹಾರ್ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟವು ಒಗ್ಗಟ್ಟಾಗಿ ಚುನಾವಣಾ ಕಣಕ್ಕಿಳಿದಿದೆ. ಈ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿಯಲು ಎಲ್ಲರೂ ಬೆಂಬಲಿಸಿ, ಸಹಕರಿಸಬೇಕು.


ಅಲ್ಲದೆ, ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ್ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ನೆಲೆಸಿರುವ ಬಿಹಾರ್ ನಿವಾಸಿಗಳಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಕಂಪನಿಗಳು ಮೂರು ದಿನಗಳ ರಜೆ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.